ಮದುವೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ವಧು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ನವಿಪೇಟ್ ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ ನಡೆದಿದೆ. ರವಳಿ ಆತ್ಮಹತ್ಯೆ ಮಾಡಿಕೊಂಡ ವಧು. ಈಕೆಯ ಮದುವೆ ಇಂದು ನಡೆಯಬೇಕಿತ್ತು. ಮಂಟಪಕ್ಕೆ ತೆರಳಲು ಸಿದ್ಧರಾಗುತ್ತಿದ್ದರೆ, ಅತ್ತ ವಧು ರವಳಿ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದರಿಂದ ಇಡೀ ಊರಿಗೆ ಊರೇ ಬೆಚ್ಚಿಬಿದ್ದಿದೆ. ವಧು ರವಳಿಯ ಆತ್ಮಹತ್ಯೆಗೆ ಮನೆಯವರ ಬಲವಂತದ ಮದುವೆ ಕಾರಣ ಎಂದು ಹೇಳಲಾಗಿದೆ. ಮತ್ತೊಂದೆಡೆ ಆಕೆಯ ಭಾವಿ ಪತಿಯ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗಿದ್ದಾಳೆ ಎನ್ನಲಾಗ್ತಿದೆ.ನಿಜವಾದ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ವಧುವಿನ ಸಾವಿನಿಂದ ಮದುವೆ ಸಂಭ್ರಮದಲ್ಲಿದ್ದ ಮನೆ ದುಃಖ ಸಾಗರದಲ್ಲಿ ಮುಳುಗಿದೆ.