ಎಗ್ರೈಸ್,ಕಬಾಬ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಹತ್ಯೆಗೈದ ಪಾತಕಿ.ಈ ಘಟನೆ ನಡೆದಿರುವುದು ಬಾಗಲಕೋಟೆ ಜಿಲ್ಲೆಯ ಅಮೀನಗಡ ಪಟ್ಟಣದ ಬಸ್ ನಿಲ್ದಾಣದ ಬಳಿ. ಇಲ್ಲಿನ ಗೈಬುಸಾಬ್ ಮುಲ್ಲಾ (34) ಹತ್ಯೆಯಾದ ದುರ್ದೈವಿ. ಆರೋಪಿ ಮುಸ್ತಾಕ್ ಜಂಗಿ (20) ಕೊಲೆ ಮಾಡಿದ ಕಿರಾತಕ, ಚಾಕುವಿನಿಂದ ಇರಿದು ಪರಾರಿಯಾದ ಆರೋಪಿ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗೈಬು ಸಾಬ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದರಾದರೂ ಪ್ರಾಣ ಉಳಿಯಲಿಲ್ಲ. ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.