ಪ್ರಥಮ ಆದ್ಯತೆಯ ಮೇರೆಗೆ ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ಆಸಕ್ತಿ ವಹಿಸಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ ಟ. ಭೂಬಾಲನ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಕುರಿತ ಸಭೆಯಲ್ಲಿ ಮಾತನಾಡಿದ ಅವರು ಕುಡಿಯುವ ನೀರು ಸರಬರಾಜು ಕಾರ್ಯದಲ್ಲಿ ಪೈಪ್ ಲೈನ್, ಯಂತ್ರಗಳ ಸಣ್ಣ ಪುಟ್ಟ ದುರಸ್ತಿ ಕಾರ್ಯಗಳು ಏನಾದರೂ ಇದ್ದರೆ, ತಕ್ಷಣವೇ ದುರಸ್ತಿಗೊಳಿಸಬೇಕು ಎಂದು ಸೂಚಿಸಿದ್ದಾರೆ.