ಡೊಣಿ ನದಿಯ ಪ್ರವಾಹ ಸೇರಿದಂತೆ ಮಳೆಯಿಂದಾದ ವೀಕ್ಷಣೆಗಾಗಿ ವಿಜಯಪುರ ಪ್ರವಾಸದಲ್ಲಿದ್ದ ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ಅವರು ವಿಮಾನ ನಿಲ್ದಾಣ ನಿರ್ಮಾಣದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಗತಿಯಲ್ಲಿರುವ ಟರ್ಮಿನಲ್ ಕಟ್ಟಡ ಎಟಿಸಿ ಟಾವರ್ ಸಿಎಪ್ಆರ್ ಕಟ್ಟಡ ರನ್ ವೇ ಸೇರಿದಂತೆ ಇತರೆ ಕಾಮಗಾರಿಯ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು. ವಿಜಯಪುರ ನಿಲ್ದಾಣವನ್ನು ಎಟಿಆರ್ – 72 ದಿಂದ ಏರ್ ಬಸ -320 ವಿಮಾನಗಳ ಹಾರಾಟಕ್ಕೆ ಮೇಲ್ದರ್ಜೇಗೇರಿಸುವ ಪ್ರಕ್ರಿಯೆ ನಡೆಯುತ್ತಿದೆ. ಮೂರನೇ ಹಂತದ ವಿಮಾನ ನಿಲ್ದಾಣವನ್ನು ಮೇಲ್ದರ್ಜೇಗೇರಿಸುವ ಕಾಮಗಾರಿಗೆ ಅವಶ್ಯವಿರುವ 120 ಕೋಟಿಗಳಿಗೆ ಸಹ ಸರ್ಕಾರದಿಂದ ಅನುಮತಿ ಸಿಕ್ಕಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ಮಾಹಕ ಅಭಿಯಂತರರಾದ ಸಿ. ಬಿ.ಚಿಕ್ಕಲಗಿ ಅವರು ಸಚಿವರಿಗೆ ಮಾಹಿತಿ ನೀಡಿದರು.
ಈವೇಳೆ ಮಾತನಾಡಿದ ಸಚಿವರು ಜಿಲ್ಲೆಯ ಜನರ ಬಹು ನಿರೀಕ್ಷೆಯ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು 2023ರ ಮಾರ್ಚ ಅಂತ್ಯದವರೆಗೆ ಪೂರ್ಣಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಗಡುವು ವಿದಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಸೋಮನಗೌಡ ಬಿ ಪಾಟೀಲ ಸಾಸನೂರ, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಶಿಂಧೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೆಚ್ .ಡಿ .ಆನಂದಕುಮಾರ ವಿಜಯಪುರ ತಹಸೀಲ್ದಾರ ಸಿದ್ದರಾಯ ಬೋಸಗಿ ಹಾಗೂ ಇತರರು ಇದ್ದರು.