ಹೊಸ ಮುಖ್ಯಮಂತ್ರಿ ಮೊದಲ ದಿನವೇ ಕಾಂಗ್ರೆಸ್ ಹೈಕಮಾಂಡ್ನ ಕೈಗೊಂಬೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಕಟೀಲ್, ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಯಾರನ್ನು ಮಂತ್ರಿ ಮಾಡಬೇಕು ಎಂಬುದನ್ನು ನಿರ್ಧರಿಸುವ ಸ್ವಾತಂತ್ರ್ಯ ಸಿದ್ದರಾಮಯ್ಯನವರಿಗೆ ಇಲ್ಲ ಎನ್ನುವುದಕ್ಕೆ ಈ ಪತ್ರವೇ ಸಾಕ್ಷಿ. ಸಮಾಜವಾದಿ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿರುವ ಸಿದ್ದರಾಮಯ್ಯ ಅವರು ಮೊದಲ ದಿನದಿಂದಲೇ ತಾವು ಕಾಂಗ್ರೆಸ್ ಹೈಕಮಾಂಡ್ನ ಕೈಗೊಂಬೆಯಾಗಿದ್ದು, ರಬ್ಬರ್ ಸ್ಟಾಂಪ್ ಮುಖ್ಯಮಂತ್ರಿಯಾಗಿದ್ದಾರೆ ಎಂದು ಕಟೀಲ್ ಟ್ವಿಟ್ ಮಾಡಿದ್ದಾರೆ.