ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಹಾಗೂ ಪತ್ನಿಯ ತಾಯಿ ಕೊಲೆಗೈದಿರುವ ಘಟನೆ ವಿಜಯಪುರ ನಗರದ ನವಬಾಗ್ದಲ್ಲಿ ನಡೆದಿದೆ. ರೂಪಾ ಮೇತ್ರಿ (32) ಕಲ್ಲವ್ವ (55) ಕೊಲೆಯಾದವರು. ಇನ್ನು ಮಲ್ಲಿಕಾರ್ಜುನ ಮೇತ್ರಿ ಕೊಲೆಗೈದಿರುವ ಆರೋಪಿ. ರೂಪಾ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳುತ್ತಿ ರಲಿಲ್ಲವಂತೆ ಹಾಗೂ ಮನೆಯಲ್ಲಿ ಕೆಲಸ ಮಾಡುತ್ತಿರಲಿಲ್ಲವಂತೆ. ಸದಾ ಮನೆಯಾಚೆ ರೂಪಾ ಇರುತ್ತಿದ್ದಳು. ಇದರಿಂದ ರೋಸಿ ಹೋಗಿದ್ದ ಮಲಗಿದ್ದ ವೇಳೆ ಕಟ್ಟಿಗೆಯಿಂದ ತಲೆಗೆ ಹೊಡೆದು ಪತ್ನಿ ಹಾಗೂ ಅತ್ತೆಯನ್ನು ಕೊಲೆ ಮಾಡಿದ್ದಾನೆ