ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಸ್ಥಳದಲ್ಲೆ ಬೈಕ್ ಸವಾರ ಸಾವನಪ್ಪಿದ್ದು ಸರ್ಕಾರಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದರು. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸಿಂದಗಿ ಸಿ ಪಿ ಐ ಹುಲಿಗೆಪ್ಪ ಮತ್ತು ಪಿ ಎಸ್ ಐ ಭೀಮಪ್ಪ ರಬಕವಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.