ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಿಕ್ಷಕಿಯೊಬ್ಬಳು ಐದನೇ ವಿದ್ಯಾರ್ಥಿನಿಯನ್ನು ಶಾಲಾ ಕಟ್ಟಡದ ಮೊದಲ ಮಹಡಿಯಿಂದ ಕೆಳಗೆ ತಳ್ಳಿರುವ ಆಘಾತಕಾರಿ ಘಟನೆ ನಡೆದಿದೆ.ಗಂಭೀರವಾಗಿ ಗಾಯಗೊಂಡಿರುವ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿ ನಗರ ನಿಗಮ್ ಬಾಲಿಕಾ ವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ.ಮೊದಲಿಗೆ ಐದನೇ ತರಗತಿ ಮಗು ವಂದನಾಳಿಗೆ ಶಿಕ್ಷಕಿ ಗೀತಾ ದೇಶ್ವಾಲ್ ಎಂಬಾಕೆ ಕತ್ತರಿಯಿಂದ ಹಲ್ಲೆ ನಡೆಸಿದ್ದಾಳೆ.ಇದನ್ನು ಗಮನಿಸಿದ ಸಹ ಶಿಕ್ಷಕಿ ರಿಯಾ ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಕೋಪದಿಂದ ಶಿಕ್ಷಕಿ ಮಗುವನ್ನು ಕಟ್ಟಡದ ಮೊದಲನೇ ಮಹಡಿಯಿಂದ ಕೆಳಗೆ ದೂಡಿ ಹಾಕಿದ್ದಾಳೆ. ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.ವಿಷಯ ತಿಳಿದ ಪೊಲೀಸರು ಶಿಕ್ಷಕಿಯನ್ನು ವಶಕ್ಕೆ ಪಡೆದು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.