ಬಜೆಟ್ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಬಜೆಟ್ ಕುರಿತು ವ್ಯಂಗ್ಯವಾಡಿದ್ದಾರೆ. ಇದು ಕೈಗೆ ಸಿಗದ ಬಿಸಿಲು ಕುದುರೆ ಬಜೆಟ್ ಎಂದಿದ್ದಾರೆ.ಬಿಜೆಪಿಯವರ ಡಬಲ್ ಇಂಜಿನ್ ಕಟ್ಟು ನಿಂತು ಹೊಗೆ ಬರುತ್ತಿದೆ. ಬೊಮ್ಮಾಯಿ ಅವರು ತಾವೂ ಒಂದು ಬಜೆಟ್ ಮಂಡಿಸಿದ್ದೇವೆ ಎಂದು ಹೇಳಿಕೊಳ್ಳಲು ಇದರ ಪ್ರತಿಯನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ. ಅದನ್ನು ಜಾತ್ರೆಯ ಕನ್ನಡಕ ಹಾಕಿಕೊಂಡು ನೋಡಬೇಕು ಎಂದು ವ್ಯಂಗ್ಯವಾಡಿದ್ದಾರೆ.