ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ. ರಾಜಧಾನಿ ಇಂಫಾಲ್ನ ನ್ಯೂ ಲಂಬುಲೇನ್ ಪ್ರದೇಶದಲ್ಲಿ ಕೆಲವರು 3 ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಸ್ಥಳೀಯರು ಸ್ಥಳದಲ್ಲಿ ಸೇನೆಯನ್ನು ನಿಯೋಜಿಸುವಂತೆ ಘೋಷಣೆಗಳನ್ನು ಕೂಗಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟಿಸಲು ಸಜ್ಜಾಗಿದ್ದ ಗುಂಪುಗಳನ್ನು ಚದುರಿಸಿದ್ದಾರೆ.