ವಲಸಿಗ ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಮರು ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಇಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ಪಕ್ಷ ಬಿಟ್ಟು ಹೋದವರಷ್ಟೇ ಅಲ್ಲ, ಯಾರೇ ಬಂದರೂ ಸ್ವಾಗತ. ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ?, ಬಿಜೆಪಿ ದಿವಾಳಿಯಾಗಿದೆ. ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪ್ರಧಾನಿ ಮೋದಿಯೇ ಭೇಟಿಗೆ ಬರಬೇಡಿ ಎಂದಿದ್ದರಂತೆ ಎಂದು ಹೇಳಿದರು.