ನಟಿ ಸಮಂತಾ ರುತ್ ಪ್ರಭು ರಾಜಕೀಯಕ್ಕೆ ಹೋಗುತ್ತಾರೆ ಎಂಬ ಬಗ್ಗೆ ಸುದ್ದಿ ಹರಿದಾಡುತ್ತಿದೆ. ತೆಲಂಗಾಣದ ಕೈಮಗ್ಗ ನೇಕಾರರು ನೇಯ್ದ ಬಟ್ಟೆಗಳ ರಾಯಭಾರಿಯಾಗಿರುವ ಸಮಂತಾ, ಆಗಾಗ ಕೃಷಿಕರ ಸಮಸ್ಯೆಗಳ ಕುರಿತೂ ಮಾತನಾಡಿದ್ದಾರೆ. ಜತೆಗೆ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ನೇತೃತ್ವದ ತೆಲಂಗಾಣ ಸರ್ಕಾರದ ಹಲವು ಕಾರ್ಯಕ್ರಮಗಳಲ್ಲೂ ಸಮಂತಾ ಭಾಗಿಯಾಗಿದ್ದು, ಅದೇ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಸದ್ಯ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಸಮಂತಾ ಅಧಿಕೃತವಾಗಿ ಏನೂ ಹೇಳಿಲ್ಲ.