ಬೆಂಗಳೂರು : ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರವು ಹೊಸ ವರ್ಷಕ್ಕೆ ಸಿಹಿಸುದ್ದಿ ನೀಡಿದ್ದು, ಯುವನಿಧಿ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಿದ್ದು, ಈ ತಿಂಗಳ ಮಾಸಾಂತ್ಯಕ್ಕೆ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ ಎಂದು ಮೂಲಗಳು ತಿಳಿಸಿವೆ.ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಿಸಲಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಿದ್ದು, ಇದೀಗ ಯುವನಿಧಿ ಯೋಜನೆಯನ್ನು ಜಾರಿಗೆ ಸಿದ್ಧತೆ ನಡೆಸಿದೆ.2023 ರಲ್ಲಿ ಪದವಿ ಮತ್ತು ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿ, ಆರು ತಿಂಗಳಾದ್ರೂ ಉದ್ಯೋಗ ಸಿಗದೆ ಪರದಾಡುತ್ತಿರುವ ಯುವಕ-ಯುವತಿಯರಿಗೆ ಯುವನಿಧಿ ಯೋಜನೆಯ ಲಾಭ ದೊರೆಯಲಿದೆ.
ಪದವಿ ಅಥವಾ ಡಿಪ್ಲೋಮಾ ಉತ್ತೀರ್ಣರಾಗಿ ಆರು ತಿಂಗಳಾದ್ರೂ ಕೆಲಸ ಸಿಗದವರು ಯೋಜನೆಯ ಲಾಭ ಪಡೆಯಲು ಅರ್ಹರಾಗಿರಲಿದ್ದಾರೆ. ಜೊತೆಗೆ ಉನ್ನತ ಶಿಕ್ಷಣ ಪಡೆಯಲು ಸೇರ್ಪಡೆಯಾಗಿರಬಾರದಾಗಿದೆ. ಸದ್ಯ ಉದ್ಯೋಗ ದೊರಕದವರು ಎರಡು ವರ್ಷಗಳ ವರೆಗೆ ಯೋಜನೆಯ ಫಲಾನುಭವಿಗಳಾಗಿರಲಿದ್ದಾರೆ.ಪದವಿ ವಿದ್ಯಾರ್ಥಿಗಳಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿದವರಿಗೆ ಮಾಸಿಕ 1,500 ರೂ. ಸಹಾಯಧನ ನೀಡಲಾಗುತ್ತದೆ. ಒಂದು ವೇಳೆ ಎರಡು ವರ್ಷದೊಳಗೆ ಉದ್ಯೋಗ ದೊರೆತರೆ ಅವನ್ನು ಯೋಜನೆಯ ಫಲಾನುಭವಿ ಪಟ್ಟಿಯಿಂದ ಹೊರಗಿಡಲಾಗುತ್ತದೆ.
ಯಾರಿಗೆಲ್ಲಾ ಸಿಗಲಿದೆ ಯುವನಿಧಿ ಯೋಜನೆ ಭತ್ಯೆ?
2022-2023ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೊಮಾದಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಇದಕ್ಕಿಂತ ಹಿಂದೆ ಪದವಿ ಅಥವಾ ಡಿಪ್ಲೋಮಾ ಮುಗಿಸಿದವರಿಗೆ ಭತ್ಯೆ ಸಿಗಲ್ಲ ಎಂದು ವರದಿಯಾಗಿದೆ.
ಯುವನಿಧಿ ಯೋಜನೆಗೆ ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್, 10ನೇ ತರಗತಿ ಅಂಕಪಟ್ಟಿ, ದ್ವಿತೀಯ ಪಿಯುಸಿ ಅಂಕಪಟ್ಟಿ , ಪದವಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ
ಡಿಪ್ಲೊಮಾ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ (ಅನ್ವಯವಾದಲ್ಲಿ), ಆದಾಯ ಪ್ರಮಾಣಪತ್ರ, ಮೊಬೈಲ್ ನಂಬ, ರ್ಬ್ಯಾಂಕ್ ಖಾತೆ ವಿವರಗಳು, ಸೆಲ್ಫ್ ಡಿಕ್ಲೆರೇಷನ್ ಪ್ರತಿ ಬೇಕಾಗುತ್ತದೆ.